Skip to main content

Police Roundup

ಚಿಕ್ಕಬಳ್ಳಾಪುರ: ₹7 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಾಡಕಚೇರಿ ಸೆಕ್ರೆಟರಿ ಲೋಕಾಯುಕ್ತ ಬಲೆಗೆ

Share News

ಚಿಕ್ಕಬಳ್ಳಾಪುರ: ಜಮೀನಿನ ಖಾತೆ ಮಾಡಿಕೊಡಲು ಬೃಹತ್ ಮೊತ್ತದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಂಗಮಕೋಟೆ ನಾಡಕಚೇರಿಯ ಸೆಕ್ರೆಟರಿ ಮೋಹನ್ ಕುಮಾರ್ ಎಂಬುವವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

 

​ಆರೋಪಿ ಸೆಕ್ರೆಟರಿ ಮೋಹನ್ ಕುಮಾರ್, ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ರೈತ ಬೈರೇಗೌಡ ಎಂಬುವವರಿಂದ ಒಟ್ಟು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ಕೆಲಸ ಆರಂಭಿಸಲು 3 ಲಕ್ಷ ರೂಪಾಯಿ ಮುಂಗಡ ಹಣ ನೀಡುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ.

 

​ಈ ಕುರಿತು ಸಂತ್ರಸ್ತ ರೈತ ಬೈರೇಗೌಡ ಅವರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

​ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin