Police Roundup

ಚಿಕ್ಕೋಡಿ: ಕಳೆದುಹೋಗಿದ್ದ 36 ಮೊಬೈಲ್ ಪತ್ತೆ; ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

Share News

ಮೊಬೈಲ್ ಕಳೆದುಕೊಂಡು ಆತಂಕದಲ್ಲಿದ್ದ ಸಾರ್ವಜನಿಕರ ಮೊಗದಲ್ಲಿ ಚಿಕ್ಕೋಡಿ ಪೊಲೀಸರು ನಗು ಮೂಡಿಸಿದ್ದಾರೆ. ಸಿ.ಇ.ಐ.ಆರ್ (CEIR) ಪೋರ್ಟಲ್ ಸಹಾಯದಿಂದ ಪತ್ತೆ ಹಚ್ಚಲಾದ ಸುಮಾರು 36 ಮೊಬೈಲ್ ಫೋನ್‌ಗಳನ್ನು ಪೊಲೀಸರು ಇಂದು ವಾರಸುದಾರರಿಗೆ ಮರಳಿಸಿದ್ದಾರೆ.

 

ವಿವಿಧ ಸಂದರ್ಭಗಳಲ್ಲಿ ಕಳೆದುಹೋಗಿದ್ದ ಹಾಗೂ ಕಳವಾಗಿದ್ದ ಮೊಬೈಲ್ ಫೋನ್‌ಗಳ ಬಗ್ಗೆ ಸಾರ್ವಜನಿಕರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರುಗಳನ್ನು ಆಧರಿಸಿ ತನಿಖೆ ಕೈಗೊಂಡ ಪೊಲೀಸರು, ಕೇಂದ್ರ ಸರ್ಕಾರದ CEIR (Central Equipment Identity Register) ಪೋರ್ಟಲ್‌ನಲ್ಲಿ ಮೊಬೈಲ್ ಮಾಹಿತಿ ದಾಖಲಿಸಿ ಅವುಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

 

ಪತ್ತೆಯಾದ 36 ಮೊಬೈಲ್ ಫೋನ್‌ಗಳನ್ನು ಠಾಣೆಗೆ ಕರೆಸಲಾಗಿದ್ದ ವಾರಸುದಾರರಿಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ತಿಂಗಳುಗಳ ಹಿಂದೆ ಕಳೆದುಕೊಂಡಿದ್ದ ತಮ್ಮ ಪ್ರೀತಿಯ ಮೊಬೈಲ್ ಫೋನ್‌ಗಳು ಮತ್ತೆ ಕೈಸೇರುತ್ತಿದ್ದಂತೆ ವಾರಸುದಾರರು ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಕೃತಜ್ಞತೆ ಸಲ್ಲಿಸಿದರು.

 

ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಅಧಿಕಾರಿಗಳು, “ಸಾರ್ವಜನಿಕರು ತಮ್ಮ ಮೊಬೈಲ್ ಫೋನ್‌ಗಳನ್ನು ಕಳೆದುಕೊಂಡ ತಕ್ಷಣ ಗಾಬರಿಯಾಗುವ ಅಗತ್ಯವಿಲ್ಲ. ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಅಥವಾ ಸ್ವತಃ ceir.gov.in ಪೋರ್ಟಲ್‌ಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಸಲ್ಲಿಸಬೇಕು. ಇದರಿಂದ ಮೊಬೈಲ್ ದುರ್ಬಳಕೆಯಾಗುವುದನ್ನು ತಡೆಯಬಹುದು ಹಾಗೂ ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ,” ಎಂದು ಮನವಿ ಮಾಡಿದರು.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin