Skip to main content

Police Roundup

ದೇವನಹಳ್ಳಿ: ಬ್ಯಾಂಕಾಕ್‌ನಿಂದ ಅಕ್ರಮವಾಗಿ ಜೇಡ ಸಾಗಣೆ – ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕ ಕಸ್ಟಮ್ಸ್ ವಶಕ್ಕೆ

Share News

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ವಿವಿಧ ಜಾತಿಯ ಜೇಡಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.

 

​ಬ್ಯಾಂಕಾಕ್‌ನಿಂದ ಏರ್ ಏಷ್ಯಾ ವಿಮಾನ (FD-137) ಮೂಲಕ ಬೆಂಗಳೂರಿಗೆ ಆಗಮಿಸಿದ್ದ ಯಾಶರ್ ಸಾಮಿಯುಲ್ಲಾ ಶೆರೀಫ್ ಉಮೇರಾ ಬಾನು ಎಂಬ ಪ್ರಯಾಣಿಕನ ಚೆಕ್-ಇನ್ ಲಗೇಜ್ ಅನ್ನು ಪರಿಶೀಲಿಸಿದಾಗ ಈ ಅಪರೂಪದ ಜೇಡಗಳು ಪತ್ತೆಯಾಗಿವೆ.

 

​ಘಟನೆಗೆ ಸಂಬಂಧಿಸಿದಂತೆ ಕಸ್ಟಮ್ಸ್ ಅಧಿಕಾರಿಗಳು ಸಾಗಣೆ ಮಾಡುತ್ತಿದ್ದ ಜೇಡಗಳನ್ನು ಜಪ್ತಿ ಮಾಡಿದ್ದು, ಆರೋಪಿಯ ವಿರುದ್ಧ ಅರಣ್ಯ ಜೀವಿಗಳ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin