Police Roundup

ದೇವನಹಳ್ಳಿ: ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

Share News

ದೇವನಹಳ್ಳಿ: ಟಿಪ್ಪರ್ ಲಾರಿಯೊಂದು ಬೈಕ್ ಸವಾರನ ಮೇಲೆ ಹರಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಬಳಿ ಸಂಭವಿಸಿದೆ.

 

ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಗ್ರಾಮದ ಗೋವರ್ಧನ್ ಫ್ಯಾಕ್ಟರಿ ಬಳಿ ಈ ಅಪಘಾತ ನಡೆದಿದೆ. ತಾಲ್ಲೂಕಿನ ಚೌಡನಹಳ್ಳಿ ಗ್ರಾಮದ ನಿವಾಸಿ ಕೃಷ್ಣಪ್ಪ (60) ಮೃತಪಟ್ಟ ದುರ್ದೈವಿ. ಕೃಷ್ಣಪ್ಪ ಅವರು ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿ ಅವರ ಮೇಲೆ ಹರಿದಿದೆ. ಲಾರಿಯ ಚಕ್ರವು ಸವಾರನ ಮೇಲೆ ಹರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

 

ಅಪಘಾತದ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಟಿಪ್ಪರ್ ಲಾರಿ ಚಾಲಕನ ಅಜಾಗರುಕತೆ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಘಟನೆಗೆ ಕಾರಣ ಎನ್ನಲಾಗಿದ್ದು, ಚಾಲಕನ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin