ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಧೋಖಾದಾಯಕ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಅಪಘಾತದಲ್ಲಿ ದೊಡ್ಡಬೆಳವಂಗಲ ಸಮೀಪದ ಅಜ್ಜನಕಟ್ಟೆ ಗ್ರಾಮದ ನಿವಾಸಿ ಚಂದನ್ ಎಚ್ (23) ಸ್ಥಳದಲ್ಲೇ ಕೊನೆಯುಸಿರೆಳೆದ ದುರ್ದೈವಿ.
ಬೈಕ್ನಲ್ಲಿದ್ದ ಮತ್ತೋರ್ವ ಯುವಕ ಚೇತನ್ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ರಸ್ತೆ ಬದಿ ನಿಂತಿದ್ದ ಲಾರಿಯನ್ನು ಗಮನಿಸದೇ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿರುವುದೇ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.