Skip to main content

Police Roundup

ಸಾಲಬಾಧೆಗೆ ಮನನೊಂದು ಯುವಕ ಆತ್ಮಹತ್ಯೆ: ಹಾಸನದಲ್ಲಿ ಭೀಕರ ಘಟನೆ

Share News

ಹಾಸನ: ಸಾಲದ ಹೊರೆ ತಾಳಲಾರದೆ ಯುವಕನೊಬ್ಬ ನೇಣಿಗೆ ಶರಣಾಗಿರುವ ದುಃಖದ ಘಟನೆ ನಗರದ ವಿದ್ಯಾನಗರದಲ್ಲಿ ನಡೆದಿದೆ.

​ವಿದ್ಯಾನಗರ ನಿವಾಸಿ ಅನಿಲ್ (35) ಆತ್ಮಹತ್ಯೆ ಮಾಡಿಕೊಂಡ ದುರದೃಷ್ಟಕರ ಯುವಕ.

 

​ಘಟನೆಯ ವಿವರ:

ಅನಿಲ್ ಅವರು ಸುಮಾರು ನಾಲ್ಕು ಲಕ್ಷ ರೂಪಾಯಿಗೂ ಹೆಚ್ಚು ಕೈಸಾಲ ಮಾಡಿಕೊಂಡಿದ್ದರೆನ್ನಲಾಗಿದೆ. ಸಾಲ ತೀರಿಸಲು ಸಾಧ್ಯವಾಗದೇ ತೀವ್ರ ಮನನೊಂದಿದ್ದ ಅವರು, ಬೇರೆ ದಾರಿ ಕಾಣದೆ ಈ ಆತುರದ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

 

​ಘಟನಾ ಸ್ಥಳಕ್ಕೆ ಬಡಾವಣೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin