ಹಾವೇರಿ: ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಉನ್ನತ ಅಧಿಕಾರಿಗಳು ಹಾಗೂ ಗಣ್ಯರು ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಧೃಡೀಕರಣ ಪತ್ರ (ಪ್ರಮಾಣಪತ್ರ) ಹಾಗೂ ನೆನಪಿನ ಕಾಣಿಕೆಗಳನ್ನು ವಿತರಿಸಿ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, “ನಾಗರಿಕರಿಗೆ ಬಂದೂಕು ಸುರಕ್ಷತಾ ನಿಯಮಗಳು, ಜವಾಬ್ದಾರಿಯುತ ಬಳಕೆ ಹಾಗೂ ಕಾನೂನುಬದ್ಧ ಅರಿವು ಮೂಡಿಸುವ ಉದ್ದೇಶದಿಂದ ಈ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ತರಬೇತಿ ಪಡೆದ ಪ್ರತಿಯೊಬ್ಬರೂ ಶಿಸ್ತು, ಸುರಕ್ಷತೆ ಮತ್ತು ಕಾನೂನು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಸಲಹೆ ನೀಡಿದರು.
ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು, ತರಬೇತಿದಾರರು ಮತ್ತು ಆಹ್ವಾನಿತ ಗಣ್ಯರು ಉಪಸ್ಥಿತರಿದ್ದರು.
