Skip to main content

Police Roundup

ಹಾವೇರಿ: ಹೆಲ್ಮೆಟ್ ರಹಿತ ಬುಲೆಟ್ ಸವಾರಿ; ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡಗೆ ಟ್ರಾಫಿಕ್ ಪೊಲೀಸ್ ದಂಡದ ಶಾಕ್

Share News

ರಾಣೇಬೆನ್ನೂರು: ಸಂಚಾರ ನಿಯಮ ಉಲ್ಲಂಘಿಸಿ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ ರಾಣೇಬೆನ್ನೂರು ಕ್ಷೇತ್ರದ ಶಾಸಕ ಪ್ರಕಾಶ್ ಕೋಳಿವಾಡ ಅವರಿಗೆ ಸಂಚಾರಿ ಪೊಲೀಸರು Fine ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

 

​ಆಗಸ್ಟ್ 25ರಂದು ಶಾಸಕ ಪ್ರಕಾಶ್ ಕೋಳಿವಾಡ ಅವರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್ ಚಲಾಯಿಸಿಕೊಂಡು ಹೋಗಿದ್ದರು. ಈ ನಿಯಮ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಣೇಬೆನ್ನೂರು ಟ್ರಾಫಿಕ್ ಪೊಲೀಸರು ಶಾಸಕರ ಮನೆ ಬಾಗಿಲಿಗೆ 500 ರೂಪಾಯಿ ದಂಡದ ನೋಟಿಸ್ ತಲುಪಿಸಿದ್ದಾರೆ.

 

​ಪೋಲಿಸರ ನೋಟಿಸ್ ಬೆನ್ನಲ್ಲೇ ಶಾಸಕ ಪ್ರಕಾಶ್ ಕೋಳಿವಾಡ ಅವರು 500 ರೂಪಾಯಿ ದಂಡದ ಮೊತ್ತವನ್ನು ಪಾವತಿಸಿದ್ದಾರೆ. ಅಲ್ಲದೆ, ಈ ವಿಷಯವನ್ನು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, “ಎಸ್‌ಪಿ ಮೇಡಂ ಅವರು ನನಗೆ ನೋಟಿಸ್ ನೀಡಿದ್ದಾರೆ. ಅವರು ತಮ್ಮ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಿದ್ದಾರೆ, ಅವರ ಈ ಕ್ರಮವನ್ನು ನಾನು ಗೌರವಿಸುತ್ತೇನೆ” ಎಂದು ತಿಳಿಸಿದ್ದಾರೆ.

 

​ಕಾನೂನು ಎಲ್ಲರಿಗೂ ಒಂದೇ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದ್ದು, ಜನಪ್ರತಿನಿಧಿಯಾಗಿದ್ದರೂ ನಿಯಮ ಮೀರಿದಾಗ ದಂಡ ಪಾವತಿಸಿ, ಪೊಲೀಸರ ಕರ್ತವ್ಯವನ್ನು ಶ್ಲಾಘಿಸಿದ ಶಾಸಕರ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin