Skip to main content

Police Roundup

ಹೊಸಕೋಟೆ ಬಳಿ ನವಜಾತ ಗಂಡು ಮಗು ರಕ್ಷಣೆ: ನಿರ್ಮಾಣ ಹಂತದ ಮನೆಯ ಬಳಿ ಬಿಟ್ಟು ಹೋದ ಹೆತ್ತತಾಯಿ!

Share News

ಹೊಸಕೋಟೆ: ಹೊಸಕೋಟೆ ತಾಲೂಕಿನ ಚಿಕ್ಕನಲ್ಲೂರು ಗ್ರಾಮದ ಬಳಿ ನಿರ್ಮಾಣ ಹಂತದ ಮನೆಯೊಂದರ ಸಮೀಪ ನವಜಾತ ಗಂಡು ಮಗುವೊಂದನ್ನು ತೊರೆದು ಹೋದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

 

ರಾತ್ರಿ ಹುಟ್ಟಿದ ಮಗುವನ್ನು ಯಾರೋ ನಿರ್ಮಾಣ ಹಂತದ ಕಟ್ಟಡದ ಬಳಿ ಬಿಟ್ಟು ಹೋಗಿದ್ದಾರೆ. ಮುಂಜಾನೆ ಮಗುವಿನ ಅಳುವಿನ ಸದ್ದು ಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ಸಾರ್ವಜನಿಕರು, ತಕ್ಷಣವೇ ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬಳಿಕ ಜವಾಬ್ದಾರಿಯುತವಾಗಿ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

 

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಕ್ಕಳ ರಕ್ಷಣಾಧಿಕಾರಿಗಳು ಮಗುವನ್ನು ತಮ್ಮ ಸುಪರ್ದಿಗೆ ಪಡೆದುಕೊಂಡು, ಸೂಕ್ತ ಆರೈಕೆ ಮತ್ತು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.

 

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಾಗೂ ಅಧಿಕಾರಿಗಳು, ಹುಟ್ಟಿದ ಮಗುವನ್ನು ಕರುಣೆಯಿಲ್ಲದೆ ತೊರೆದುಹೋದ ಪೋಷಕರ ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin