Skip to main content

Police Roundup

ಕಡತಗಳ ಸಮರ್ಪಕ ನಿರ್ವಹಣೆ: ಕರ್ತವ್ಯನಿಷ್ಠ ಪೊಲೀಸ್ ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿ ಗೌರವ!

Share News

ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಡತಗಳ ಸಮರ್ಪಕ ನಿರ್ವಹಣೆ, ದಾಖಲೆಗಳ ಸುಸೂತ್ರ ಸಂರಕ್ಷಣೆ ಹಾಗೂ ಆಡಳಿತಾತ್ಮಕ ಕಾರ್ಯಗಳಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರಿದ ಪೊಲೀಸ್ ಸಿಬ್ಬಂದಿಗೆ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಶಾಲೂ, ಐಪಿಎಸ್ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.

 

​ಈ ಸಂದರ್ಭದಲ್ಲಿ ಮಾತನಾಡಿದ ಉಪ ಪೊಲೀಸ್ ಆಯುಕ್ತರು, “ಸರ್ಕಾರಿ ಕಚೇರಿಗಳಲ್ಲಿ ಕಡತಗಳ ಸಮರ್ಪಕ ನಿರ್ವಹಣೆ ಹಾಗೂ ಸಮಯೋಚಿತ ಆಡಳಿತಾತ್ಮಕ ಕಾರ್ಯವೈಖರಿ ಇಲಾಖೆಯ ಸುಗಮ ಆಡಳಿತಕ್ಕೆ ಅತ್ಯಗತ್ಯ. ಸಿಬ್ಬಂದಿಯ ಕರ್ತವ್ಯನಿಷ್ಠೆ, ಶಿಸ್ತು ಮತ್ತು ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಉತ್ತೇಜಿಸುವುದು ಇತರೆ ಸಿಬ್ಬಂದಿಗೂ ಮಾದರಿಯಾಗಲಿದೆ” ಎಂದು ತಿಳಿಸಿದರು.

 

​ಉತ್ತಮ ಸೇವೆ ಸಲ್ಲಿಸಿ ಪ್ರಶಂಸೆಗೆ ಪಾತ್ರರಾದ ಸಿಬ್ಬಂದಿಯನ್ನು ಅಭಿನಂದಿಸಿದ ಅವರು, ಮುಂದೆಯೂ ಇದೇ ರೀತಿಯ ಬದ್ಧತೆ ಹಾಗೂ ಜವಾಬ್ದಾರಿಯೊಂದಿಗೆ ಸಾರ್ವಜನಿಕ ಸೇವೆಯಲ್ಲಿ ಮುಂದುವರಿಯುವಂತೆ ಕರೆ ನೀಡಿದರು.

 

​ಈ ಸಂದರ್ಭದಲ್ಲಿ ಕಚೇರಿಯ ಪ್ರಮುಖ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಗೌರವಕ್ಕೆ ಭಾಜನರಾದ ಸಿಬ್ಬಂದಿಯ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin