Skip to main content

Police Roundup

ಕೊಡಗು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ವಶಪಡಿಸಿಕೊಂಡಿದ್ದ ₹20.20 ಲಕ್ಷ ಮೌಲ್ಯದ ಮಾದಕ ವಸ್ತುಗಳ ನಾಶ!

Share News

ಮಡಿಕೇರಿ : ಕೊಡಗು ಜಿಲ್ಲಾ ಪೊಲೀಸರು 2026ನೇ ಸಾಲಿನಲ್ಲಿ ವಿವಿಧ ಮಾದಕ ದ್ರವ್ಯ ನಿರೋಧಕ ಕಾರ್ಯಾಚರಣೆಗಳ ಅಡಿಯಲ್ಲಿ ಜಪ್ತಿ ಮಾಡಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಇಂದು ಕಾನೂನುಬದ್ಧವಾಗಿ ಯಶಸ್ವಿಯಾಗಿ ನಾಶಪಡಿಸಿದ್ದಾರೆ.

 

​ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಸುಮಾರು 36.807 ಕೆ.ಜಿ. ಗಾಂಜಾ ಹಾಗೂ 18 ಗ್ರಾಂ ಎಂಡಿಎಂಎ (MDMA) ಸೇರಿದಂತೆ ಒಟ್ಟು ರೂ. 20,20,350 (ಇಪ್ಪತ್ತು ಲಕ್ಷದ ಇಪ್ಪತ್ತು ಸಾವಿರದ ಮುನ್ನೂರ ಐವತ್ತು ರೂಪಾಯಿ) ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ಇಂದು ಮೈಸೂರಿನ ಜಿ.ಐ.ಬಿ.ಎಸ್ (GIBS) ಘಟಕದಲ್ಲಿ ನಿಯಮಾನುಸಾರ ಸುಟ್ಟು ಭಸ್ಮಗೊಳಿಸಲಾಯಿತು.

 

ಡ್ರಗ್ಸ್ ವಿಲೇವಾರಿ ಸಮಿತಿಯ ಸಮ್ಮುಖದಲ್ಲಿ ಹಾಗೂ ನಿಗದಿತ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸುವ ಮೂಲಕ ಅತ್ಯಂತ ಸುರಕ್ಷಿತವಾಗಿ ಈ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

 

​ಮಾದಕ ಮುಕ್ತ ಸಮಾಜ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಬದ್ಧವಾಗಿದ್ದು, ಮುಂದಿನ ದಿನಗಳಲ್ಲೂ ಡ್ರಗ್ಸ್ ಜಾಲದ ವಿರುದ್ಧ ಕಠಿಣ ಕಾನೂನು ಕ್ರಮ ಮುಂದುವರಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin