Skip to main content

Police Roundup

ಕೊಳ್ಳೇಗಾಲ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಸ್ಪೀಟ್ ಅಡ್ಡೆ ಮೇಲೆ ದಾಳಿ, ಏಳು ಮಂದಿ ಬಂಧನ- ₹5.08 ಲಕ್ಷ ನಗದು ವಶ!

Share News

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪೊಲೀಸ್ ಉಪವಿಭಾಗ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆಯೊಂದರ ಮೇಲೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ನಗದು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

​ಸಂತೇಮರಹಳ್ಳಿ ಸಿಪಿಐ ಸಾಗರ್ ಅವರ ನೇತೃತ್ವದ ಪೊಲೀಸ್ ತಂಡ ಈ ಮಿಂಚಿನ ಕಾರ್ಯಾಚರಣೆ ಕೈಗೊಂಡಿದೆ.

 

ಖಚಿತ ಮಾಹಿತಿ ಮೇರೆಗೆ ಜೂಜಾಟದ ಜಾಗಕ್ಕೆ ಲಗ್ಗೆ ಇಟ್ಟ ಪೊಲೀಸ್ ತಂಡ, ಅಡ್ಡೆಯಲ್ಲಿದ್ದ ಏಳು ಮಂದಿ ಜೂಜುಕೋರರನ್ನು ಜಾಗದಲ್ಲೇ ವಶಕ್ಕೆ ಪಡೆದಿದೆ. ದಾಳಿಯ ವೇಳೆ ಪೊಲೀಸರನ್ನು ನೋಡಿ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಹುಡುಕಾಟ ಮುಂದುವರಿದಿದೆ.

 

​ಬಂಧಿತ ಆರೋಪಿಗಳಿಂದ ಜೂಜಾಟಕ್ಕೆ ಪಣಕ್ಕಿಟ್ಟಿದ್ದ ಬರೋಬ್ಬರಿ 5.08 ಲಕ್ಷ ರೂಪಾಯಿ ನಗದು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇದರೊಂದಿಗೆ ಆರೋಪಿಗಳು ಸ್ಥಳದಲ್ಲಿ ಬಳಸಿದ್ದ ಒಂದು ಕಾರು, ಮೂರು ಬೈಕ್‌ಗಳು ಹಾಗೂ ಎಂಟು ಮೊಬೈಲ್ ಫೋನ್‌ಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

 

​ಪರಾರಿಯಾಗಿರುವ ಮೂವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದು, ಈ ಸಂಬಂಧ ಕೊಳ್ಳೇಗಾಲ ಉಪವಿಭಾಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಈ ಯಶಸ್ವಿ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin