Skip to main content

Police Roundup

ಮೂಡುಬಿದಿರೆ: ಕಾರಿನಲ್ಲಿ ಎಂಡಿಎಂಎ ಸಾಗಾಟ; ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ ವೇಣೂರು ಪೊಲೀಸರು!

Share News

ಮೂಡುಬಿದಿರೆ: ಕಾರಿನಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.

​ಮಿಜಾರು ನಿವಾಸಿ ಮಹಮ್ಮದ್ ತನ್ವೀರ್ (27) ಹಾಗೂ ಮೂಡುಬಿದಿರೆ ನಿವಾಸಿ ಮಹಮ್ಮದ್ ಸಲ್ವಾನ್ (22) ಬಂಧಿತ ಆರೋಪಿಗಳಾಗಿದ್ದಾರೆ.

 

​ಮೇ 27ರಂದು ಮಧ್ಯಾಹ್ನ ಗುರುವಾಯನಕೆರೆ-ಮೂಡುಬಿದಿರೆ ರಸ್ತೆಯ ಕಂಬಳದಡ್ಡ ಎಂಬಲ್ಲಿ ಕಾರಿನಲ್ಲಿ ಮಾದಕ ದ್ರವ್ಯ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಅಕ್ಷಯ್ ಡವಗಿ ಅವರಿಗೆ ಲಭ್ಯವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪಿಎಸ್‌ಐ ಹಾಗೂ ಠಾಣಾ ಸಿಬ್ಬಂದಿಗಳ ತಂಡ ಸ್ಥಳಕ್ಕೆ ತೆರಳಿ ದಾಳಿ ನಡೆಸಿದೆ.

​ಈ ವೇಳೆ ಕಾರನ್ನು ತಡೆದು ತಪಾಸಣೆ ನಡೆಸಿದಾಗ ನಿಷೇಧಿತ ಮಾದಕ ದ್ರವ್ಯ ಪತ್ತೆಯಾಗಿದ್ದು, ಸ್ಥಳದಲ್ಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ಡ್ರಗ್ಸ್ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

 

ಬಂಧಿತರಿಂದ ಸುಮಾರು 39,200 ರೂ. ಮೌಲ್ಯದ 3.92 ಗ್ರಾಂ ತೂಕದ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

​ಪ್ರಸ್ತುತ ಆರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 41/2026, ಕಲಂ: 8(c), 22(b) NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin