Skip to main content

Police Roundup

ಮೈಸೂರು ಜಿಲ್ಲಾ ಪೊಲೀಸ್‌ನಿಂದ ‘ಡ್ರಗ್ಸ್ ಫ್ರೀ ಕರ್ನಾಟಕ’ ಅಭಿಯಾನ: ನಂಜನಗೂಡಿನಲ್ಲಿ ಬೃಹತ್ ಜಾಗೃತಿ ಕಾರ್ಯಕ್ರಮ

Share News

ನಂಜನಗೂಡು: ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ “ಡ್ರಗ್ಸ್ ಫ್ರೀ ಕರ್ನಾಟಕ” ಅಭಿಯಾನದ ಅಂಗವಾಗಿ ಮಾದಕ ವಸ್ತುಗಳ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.

 

​ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಚಲನಚಿತ್ರ ನಟ ಧನ್ವೀರ್ ಗೌಡ ಹಾಗೂ ನಟಿ ಅಶ್ವಿನಿ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ಗಂಭೀರ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ ಸಂದೇಶ ನೀಡಿದರು.

​ಕಾರ್ಯಕ್ರಮದಲ್ಲಿ “ಆಪರೇಷನ್ ರೈಸ್” ಮತ್ತು “ಡ್ರಗ್ಸ್ ಬೇಡ ಬ್ರೋ” ಅಭಿಯಾನದ ಅಡಿಯಲ್ಲಿ ನಂಜನಗೂಡು ತಾಲೂಕಿನ ವಿವಿಧ ಶಾಲೆ-ಕಾಲೇಜುಗಳ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು.

 

​ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ಹಾಗೂ ಯುವಜನತೆ ಪೊಲೀಸರೊಂದಿಗೆ ಕೈಜೋಡಿಸಿ, “ಡ್ರಗ್ಸ್ ಮುಕ್ತ ಕರ್ನಾಟಕ” ನಿರ್ಮಾಣದ ದೃಢ ಸಂಕಲ್ಪದೊಂದಿಗೆ ಧ್ವನಿಗೂಡಿಸಿದರು.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin