Skip to main content

Police Roundup

ಮೈಸೂರು: ಮೂರು ವರ್ಷದ ಹೆಣ್ಣು ಹುಲಿ ಸಾವು – ಮತ್ತೊಂದು ಹುಲಿಯೊಂದಿಗೆ ಕಾದಾಟದ ಶಂಕೆ!

Share News

ಮೈಸೂರು: ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದ ಕೆರೆ ಪಕ್ಕದ ಬಯಲಿನಲ್ಲಿ ಸುಮಾರು ಮೂರು ವರ್ಷ ಪ್ರಾಯದ ಹೆಣ್ಣು ಹುಲಿಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

 

​ಸ್ಥಳೀಯರು ಹುಲಿಯ ಶವವನ್ನು ಕಂಡು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕೌವಲಂದೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

​ಕಾದಾಟ ನಡೆಸಿರುವ ಶಂಕೆ:

ಪ್ರಾಥಮಿಕ ತನಿಖೆಯ ಪ್ರಕಾರ, ಈ ಹುಲಿಯು ಮತ್ತೊಂದು ಹುಲಿಯೊಂದಿಗೆ ಪ್ರದೇಶದ ವ್ಯಾಪ್ತಿಗಾಗಿ ಕಾದಾಟ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹುಲಿಗೆ ಆಹಾರ ಹಾಗೂ ನೀರು ಸಿಗದೆ ಅಸ್ವಸ್ಥಗೊಂಡು ಮೃತಪಟ್ಟಿರಬಹುದು ಎಂಬ ಅನುಮಾನವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಮೃತಪಟ್ಟ ಹೆಣ್ಣು ಹುಲಿ ತನ್ನ ತಾಯಿಯಿಂದ ಬೇರ್ಪಟ್ಟು ಕಾಡಿನ ಗಡಿ ದಾಟಿ ಹೊರಭಾಗಕ್ಕೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ.

 

​ಮರಣೋತ್ತರ ಪರೀಕ್ಷೆ:

ಸಾವಿಗೆ ನಿಖರ ಕಾರಣ ಏನೆಂಬುದನ್ನು ತಿಳಿಯಲು ಪಶುವೈದ್ಯಕೀಯ ತಜ್ಞರ ತಂಡದಿಂದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆಯ ಪೂರ್ಣ ವರದಿ ಬಂದ ನಂತರವಷ್ಟೇ ಸಾವಿನ ನೈಜ ಕಾರಣ ಸ್ಪಷ್ಟವಾಗಲಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

 

​ವರದಿ: ಮಂಜುನಾಥ್ ಪಿ, ಮೈಸೂರು

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin