ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ (KPA) 70 ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಪ್ರಶಿಕ್ಷಣಾರ್ಥಿಗಳು ದಿನಾಂಕ 25.07.2026ರಂದು ಮೈಸೂರು ನಗರದ ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ (Special Juvenile Police Unit – SJPU) ಅಧ್ಯಯನ ಭೇಟಿ ನೀಡಿದರು.
ಈ ಅಧ್ಯಯನ ಭೇಟಿಯ ಸಂದರ್ಭದಲ್ಲಿ, ಸಿಸಿಬಿ ಎಸಿಪಿ (CCB ACP) ಹಾಗೂ ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಯವರು ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಮಕ್ಕಳ ವಿಶೇಷ ಪೊಲೀಸ್ ಘಟಕದ ಪ್ರಮುಖ ಉದ್ದೇಶ, ಅದರ ಸ್ವರೂಪ ಹಾಗೂ ದೈನಂದಿನ ಕಾರ್ಯವೈಖರಿಯ ಕುರಿತು ಸಮಗ್ರವಾದ ಮಾಹಿತಿ ನೀಡಿದರು.
ಮಕ್ಕಳ ಹಕ್ಕುಗಳ ರಕ್ಷಣೆ, ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಸಂಕಷ್ಟದಲ್ಲಿರುವ ಮಕ್ಕಳಿಗೆ ಕಾನೂನುಬದ್ಧವಾಗಿ ನೆರವಾಗುವಲ್ಲಿ ಪೊಲೀಸ್ ಇಲಾಖೆಯ ಪಾತ್ರದ ಕುರಿತು ಪ್ರೊಬೇಷನರಿ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಯಿತು.