Police Roundup

ಮೈಸೂರಿನ ಮಾತೃಮಂಡಳಿ ವೃತ್ತದ ಸಬ್‌ವೇನಲ್ಲಿ ಅನಾಥ ಶವ ಪತ್ತೆ: ಮದ್ಯಪಾನ ಸೇವಿಸಿ ಮೃತಪಟ್ಟಿರುವ ಶಂಕೆ

Share News

ಮೈಸೂರು: ಇಲ್ಲಿನ ವಿನಾಯಕನಗರದ ಮಾತೃಮಂಡಳಿ ವೃತ್ತದ ಬಳಿ ಇರುವ ಸಬ್‌ವೇನಲ್ಲಿ ಅನಾಥ ವ್ಯಕ್ತಿಯೊಬ್ಬರ ಶವ ಇಂದು ಪತ್ತೆಯಾಗಿದೆ. ಅತಿಯಾದ ಮದ್ಯಪಾನ ಸೇವನೆಯಿಂದಾಗಿ ವ್ಯಕ್ತಿ ಮೃತಪಟ್ಟಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

 

ಮೃತ ವ್ಯಕ್ತಿಗೆ ಸರಿಸುಮಾರು 30 ರಿಂದ 35 ವರ್ಷ ವಯಸ್ಸಿರಬಹುದೆಂದು ಅಂದಾಜಿಸಲಾಗಿದೆ. ಸಬ್‌ವೇನಲ್ಲಿ ವ್ಯಕ್ತಿ ಅಚೇತನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅತಿಯಾದ ಮಧ್ಯಪಾನ ಸೇವನೆಯಿಂದ ಸಾವು ಸಂಭವಿಸಿದೆಯೇ ಅಥವಾ ಬೇರೆನಾದರೂ ಕಾರಣಗಳಿವೆಯೇ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿಯ ನಂತರ ನಿಖರ ಮಾಹಿತಿ ಲಭ್ಯವಾಗಲಿದೆ.

 

​ಸದ್ಯ ಶವವನ್ನು ವಶಕ್ಕೆ ಪಡೆದಿರುವ ಪೊಲೀಸರು, ಮೃತನ ವಾರಸುದಾರರ ಪತ್ತೆಗಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತು ಇತರ ಪೊಲೀಸ್ ಠಾಣೆಗಳಲ್ಲಿ ಮಾಹಿತಿ ಕಲೆಹಾಕುತ್ತಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin