Skip to main content

Police Roundup

ಪೊಲೀಸ್ ನೇಮಕಾತಿ ಪರೀಕ್ಷೆ ಮರುಪರೀಕ್ಷೆಗೆ ಆಗ್ರಹ: ವಿಜಯಪುರದಲ್ಲಿ ಎಬಿವಿಪಿ ಪ್ರತಿಭಟನೆ, 10ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ

Share News

ವಿಜಯಪುರ – ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಸ್ಥೆ ಖಂಡಿಸಿ ಹಾಗೂ ಮರುಪರೀಕ್ಷೆ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಇಂದು ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳದಲ್ಲಿ ಸರ್ಕಾರದ ವಿರುದ್ಧ ಪೋಸ್ಟರ್‌ಗಳನ್ನು ಪ್ರದರ್ಶಿಸಲು ಕಾರ್ಯಕರ್ತರು ಮುಂದಾ ಗುತ್ತಿದ್ದಂತೆ ಪೊಲೀಸರು ಅವುಗಳನ್ನು ಕಸಿದುಕೊಂಡರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು.

 

ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದರು. ಈ ವೇಳೆ ಎರಡೂ ಕಡೆಯವರ ನಡುವೆ ಜಟಾಪಟಿ ಉಂಟಾಗಿ, ಪ್ರತಿಭಟನಾಕಾರರನ್ನು ಪೊಲೀಸ್ ವ್ಯಾನ್‌ಗೆ ಹತ್ತಿಸಲು ಪೊಲೀಸರು ಹರಸಾಹಸಪಟ್ಟರು.

 

ಕೊನೆಗೆ 10ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು. ಕೆಲಕಾಲ ಪ್ರತಿಭಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಭಟ ನಾಕಾರರು ಪೊಲೀಸ್ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

 

ವರದಿ – ಗುಂಡು ಕುಲಕರ್ಣಿ ವಿಜಯಪುರ


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin