Skip to main content

Police Roundup

ರಾಜ್ಯ ಮಾಧ್ಯಮ ವಕ್ತಾರರಾಗಿ ಮಹೇಶ್ ಶರ್ಮಾ ನೇಮಕ – ಶುಭಾಶಯಗಳ ಮಹಾಪೂರ!

Share News

ಕರ್ನಾಟಕ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ (ರಿ.) ವತಿಯಿಂದ ಬೆಳಗಾವಿಯ ಶ್ರೀ ಮಹೇಶ್ ಎಸ್/o ಮಂಜುನಾಥ್ ಶರ್ಮಾ ಅವರನ್ನು ಸಂಘಟನೆಯ ರಾಜ್ಯ ಮಾಧ್ಯಮ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

 

​ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಭೀಮಪುತ್ರಿ ನಾಗಮ್ಮ ಅವರು ಈ ನೂತನ ನೇಮಕಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಮಹೇಶ್ ಶರ್ಮಾ ಅವರ ನಾಯಕತ್ವ ಹಾಗೂ ಸಮಾಜಮುಖಿ ಚಿಂತನೆಗಳು ಸಂಘಟನೆಯ ಧ್ಯೇಯ-ಉದ್ದೇಶಗಳನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ತಲುಪಿಸಲು ನೆರವಾಗಲಿ ಎಂದು ಶುಭ ಹಾರೈಸಿದ್ದಾರೆ.

 

​ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಹಕ್ಕುಗಳ ರಕ್ಷಣೆ, ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಸಂಘಟನೆ ನಡೆಸುತ್ತಿರುವ ಹೋರಾಟಕ್ಕೆ ಇವರ ಸೇರ್ಪಡೆಯಿಂದ ಇನ್ನಷ್ಟು ಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಲಾಗಿದೆ.

 

​ಸಂಘಟನೆಯ ರಾಜ್ಯಮಟ್ಟದ ಚಟುವಟಿಕೆಗಳು, ಸಾಮಾಜಿಕ ಸಮಸ್ಯೆಗಳು ಹಾಗೂ ಜನಪರ ವಿಚಾರಗಳನ್ನು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಲಿದ್ದಾರೆ. ನೂತನವಾಗಿ ನೇಮಕಗೊಂಡ ಮಹೇಶ್ ಶರ್ಮಾ ಅವರಿಗೆ ಸಂಘಟನೆಯ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು ಶುಭ ಕೋರಿದ್ದಾರೆ.

 


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin