ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಕಿಡಿಗೇಡಿಯೊಬ್ಬ ಹಚ್ಚಿದ ಬೆಂಕಿಯಿಂದಾಗಿ 6 ಅಮಾಯಕ ಹಸುಗಳು ಸಜೀವ ದಹನವಾಗಿವೆ. ನಾಯಿಗಳನ್ನು ಹೆದರಿಸಲು ಕಸಕ್ಕೆ ಬೆಂಕಿ ಹಚ್ಚಿದ್ದಾಗಿ ಆರೋಪಿ ಹೇಳಿಕೆ ನೀಡಿದ್ದು, ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಈ ಕೃತ್ಯದ ಹಿಂದಿನ ನಿಜವಾದ ಉದ್ದೇಶವನ್ನು ತನಿಖೆ ಮಾಡುತ್ತಿದ್ದಾರೆ. ಬೆಂಗಳೂರಿನ ಡಿಜೆ ಹಳ್ಳಿಯ ಶಾಂಪುರ ರಸ್ತೆಯಲ್ಲಿರುವ ಪ್ಲೈವುಡ್ ಅಂಗಡಿಯೊಂದರಲ್ಲಿ ಸೋಮವಾರ ತಡರಾತ್ರಿ ಭೀಕರ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲಿ ಪಕ್ಕದಲ್ಲಿದ್ದ ಶ್ರೀನಿವಾಸ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಗೆ ವ್ಯಾಪಿಸಿದೆ. ಈ ದುರ್ಘಟನೆಯಲ್ಲಿ…