ಬೆಂಗಳೂರು: ವಿಧಾನ ಪರಿಷತ್‌ನ ಉಪಸಭಾಪತಿ ಹುದ್ದೆಗೆ ಹಿರಿಯ ನಟಿ ಹಾಗೂ ಮೇಲ್ಮನೆ ಸದಸ್ಯೆ ಉಮಾಶ್ರೀ ಅವರ ಹೆಸರನ್ನು ಅಧಿಕೃತವಾಗಿ ಸೂಚಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್‌ನ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ಅವರು ಮೇಲ್ಮನೆ ಕಾರ್ಯದರ್ಶಿಯವರಿಗೆ ಸೋಮವಾರ ಈ ಕುರಿತಾದ ಪ್ರಸ್ತಾವನೆಯನ್ನು ಹಸ್ತಾಂತರಿಸಿದರು.
ಈ ಪ್ರಮುಖ ಸಂದರ್ಭದಲ್ಲಿ ನಾಯಕರಾದ ಗೋವಿಂದರಾಜ್, ಬಸನಗೌಡ ಬಾದರ್ಲಿ, ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಹಲವು ಪ್ರಮುಖ ಜನಪ್ರತಿನಿಧಿಗಳು ಹಾಜರಿದ್ದರು. ಉಮಾಶ್ರೀ ಅವರ ಸುದೀರ್ಘ ಸಾರ್ವಜನಿಕ ಸೇವೆ ಹಾಗೂ ಅನುಭವವನ್ನು ಪರಿಗಣಿಸಿ ಈ ಹುದ್ದೆಗೆ ಅವರ ಹೆಸರನ್ನು ಆಯ್ಕೆ ಮಾಡಲಾಗಿದೆ.